
ಕಾರ್ಕಳ,ಏ.14: ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಶಾಸಕರ ಜನಸೇವಾ ಕಛೇರಿಯಲ್ಲಿ ಇಂದು ಅತ್ಯಂತ ಶ್ರದ್ಧಾಭಕ್ತಿ ಗೌರವಗಳೊಂದಿಗೆ ಆಚರಿಸಲಾಯಿತು.
ಶಾಸಕ ವಿ ಸುನಿಲ್ ಕುಮಾರ್ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಜೊತೆಗೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.
ಪಕ್ಷದ ವಕ್ತಾರರಾದ ರವಿಂದ್ರ ಮೊಯ್ಲಿ ಯವರು ಅಂಬೇಡ್ಕರ್ ಅವರ ಕುರಿತು ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿ “ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯದ ನಾಯಕರಲ್ಲ, ಅವರು ಇಡೀ ರಾಷ್ಟ್ರದ ಆಸ್ತಿ. ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಕುರಿತಾದ ಅವರ ಆಶಯಗಳು ಇಂದಿಗೂ ಪ್ರಸ್ತುತವಾಗಿವೆ” ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್ ನಾಯಕ್, ನಗರ ಅಧ್ಯಕ್ಷರಾದ ಶ್ರೀನಿರಂಜನ್ ಜೈನ್, ಮಾಜಿ ಪುರಸಭಾ ಅಧ್ಯಕ್ಷರಾದ ಸುಮಾ ಕೇಶವ್ ಪುರಸಭಾ ಸದಸ್ಯರು, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್ ಕಾರ್ಲ, ವಿವಿಧ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ, ಪದಾಧಿಕಾರಿಗಳು, ಮುಂತಾದವರು ಉಪಸ್ಥಿತರಿದ್ದರು.

















.
.
.
.
.
.
.
.
.
.
