ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಆದರೆ ಪೂರ್ವನಿಗದಿತ SSLC ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.
ಸಮುದ್ರದಲ್ಲಿ ಭಾರೀ ಅಲೆಗಳು ಏಳುತ್ತಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.