






ಉಡುಪಿ ಜು. 16: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸ್ವರೂಪ. ಟಿ.ಕೆ ಆದೇಶಿಸಿದ್ದಾರೆ. ಅಲ್ಲದೇ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.


