ಕಾರ್ಕಳ: ಕಾರ್ಕಳ, ಹೆಬ್ರಿ, ಬೈಂದೂರು ಹಾಗೂ ಕುಂದಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಾಳಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ತರಗತಿಗಳಿಗೆ ಆಯಾ ತಾಲೂಕುಗಳ ತಹಸೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.
ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಬಿ.ಇ.ಒ ರವರು ಆದೇಶಿಸಿದ್ದಾರೆ.
ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಹಾಗೂ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಕೂಡ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ


`