ಬೆಂಗಳೂರು :ಮಾಜಿ ಸಿಎಂ ಹಾಲಿ ಸಂಸದ ಡಿ.ವಿ ಸದಾನಂದ ಗೌಡ ಅವರಿಗೆ ಈ ಬಾರಿಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿರುವ ಡಿವಿ ಸದಾನಂದ ಗೌಡಗೆ ಈ ಬಾರಿ ಲೋಕಸಭಾ ಟಿಕೆಟ್ ಮಿಸ್ ಆಗಿದ್ದು ಈ ಕುರಿತು ಬಿಜೆಪಿ ಹೈಕಮಾಂಡ್ ನಾಯಕರು ದೂರವಾಣಿ ಕರೆ ಮಾಡಿ ಸದಾನಂದ ಗೌಡಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಅಭ್ಯರ್ಥಿ ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಸದಾನಂದ ಗೌಡರಿಗೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಉತ್ತರ ಕ್ಷೇತ್ರದ ಹಾಲಿ ಸಂಸದರಾಗಿ ಡಿವಿ ಸದಾನಂದ ಗೌಡ 2014 ಹಾಗೂ 2019 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಕುರಿತಂತೆ ಟ್ವೀಟ್ ನಲ್ಲಿ ಅವರು ಕೂಡ ಕ್ಷೇತ್ರದ ಜನತೆಗೆ ಧನ್ಯವಾದಗಳು ತಿಳಿಸಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ, ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ.
ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.






