ಬೆಂಗಳೂರು: ಕರ್ನಾಟಕ ಸರ್ಕಾರ ಅಕ್ಟೋಬರ್ ತಿಂಗಳಿನಿಂದಲೇ ಜಾರಿಗೆ ಬರುವಂತೆ ಆಸ್ತಿಗಳ ನೋಂದಣಿಯಲ್ಲಿ ಮಹತ್ವದ ಬದಲಾವಣೆ ಮಾಡಲಿದೆ. ಈಗಾಗಲೇ ಕಂದಾಯ ಇಲಾಖೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿರುವ ಈ ಆಸ್ತಿ ತಂತ್ರಾಂಶವನ್ನು ಇತರೆ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಆಸ್ತಿಗಳ ನೋಂದಣಿ ಮಾಡಲು ಇ-ಖಾತಾ ಕಡ್ಡಾಯವಗಿದೆ.
ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಹೀಗಾಗಿ ಇ-ಖಾತಾ ಕಡ್ಡಾಯಗೊಳಿಸಲಾಗಿದೆ.
ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಆಸ್ತಿಗಳ ನೋಂದಣಿ ಮಾಡಲು ಇ-ಖಾತಾ ಕಡ್ಡಾಯಗೊಳಿಸಿದೆ. ಅಕ್ಟೋಬರ್ 7ರ ಬಳಿಕ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ಆದ್ದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ತಮ್ಮ ಆಸ್ತಿಯನ್ನು ಮಾರಾಟ ಮಾಡಬೇಕು ಎಂದರೆ ತತ್‌ಕ್ಷಣ ಹೋಗಿ ಇ-ಖಾತಾ ಪಡೆದುಕೊಳ್ಳಬೇಕು. ಇದರ ಸಹಾಯದಿಂದ ಮಾತ್ರ ನಕಲಿ ನೋಂದಣಿ ತಡೆಯಬಹುದಾಗಿದೆ ಎಂದು ಕಂದಾಯ ಇಲಾಖೆ ಕರೆ ನೀಡಿದೆ.