
ಕಾರ್ಕಳ, ಜೂ.10:ನಿಂಜೂರು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ಮತ್ತು ಪಾದರಕ್ಷೆ ವಿತರಣೆ ಕಾರ್ಯಕ್ರಮ ಜೂ.6 ರಂದು ನಡೆಯಿತು.
ಹಳೆ ವಿದ್ಯಾರ್ಥಿಗಳ ದೇಣಿಗೆಯ ಹಾಗೂ ಅಂಗನವಾಡಿಯ ಕಾರ್ಯಕರ್ತೆ ಲೀಲಾವತಿ ನಾಯಕ್ ಇವರ ಸಹಾಯದಿಂದ ಶಾಲಾ ಮುಖ್ಯೋಪಾಧ್ಯಾಯ ಪುರುಷೋತ್ತಮರವರ ನೇತೃತ್ವದಲ್ಲಿ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಳೆ ವಿದ್ಯಾರ್ಥಿ ಸಂಘದ ಅಶೋಕ್ ಶೆಟ್ಟಿಯವರು ಮಾತನಾಡಿ, ಕನ್ನಡ ಶಾಲೆಯನ್ನು ಉಳಿಸಿ ಬೆಳೆಸುವುದು ಆ ಊರಿನ ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯ. ಅದಕ್ಕಾಗಿ ನಮ್ಮಿಂದಾದ ಎಲ್ಲಾ ಸೇವೆಗೂ ನಾವು ಸದಾ ಸಿದ್ದರಿದ್ದೇವೆ ಎಂದು ಎಲ್ಲಾ ಮಕ್ಕಳನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮೂಡುಮನೆ ಸಂತೋಷ್ ಶೆಟ್ಟಿ ಮತ್ತು ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.


.
.
.
.
.
.
.
.
.
.
.
.
.
.
.
.
.
.
.
.
