ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಹಣ ಪಡೆದ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು ನೀಡಿದ ದೂರಿನ ಹಿನ್ನಲೆಯಲ್ಲಿ ಪೊಲೀಸರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್,ನಳಿನ್ ಕುಮಾರ್, ಜೆ.ಪಿ ನಡ್ಡಾ,ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಆದರ್ಶ್ ಅಯ್ಯರ್ ಎಂಬುವರು ನೀಡಿದ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ತಿಲಕ್ ನಗರದಲ್ಲಿ ಐಪಿಸಿ ಸೆಕ್ಷನ್ 384, 120ಬಿ, 34ರಡಿ ಪ್ರಕರಣ ದಾಖಲಾಗಿದೆ.
ಬಿಜೆಪಿ ನಾಯಕರ ವಿರುದ್ಧ ದಾಖಲಾದ ಎಫ್ಐಆರ್ ನಿಂದ ಕಾಂಗ್ರೆಸ್ ಗೆ ಭಾರೀ ಬಲ ಸಿಕ್ಕಂತಾಗಿದೆ. ಇದರಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮತ್ತೊಂದು ಸುತ್ತಿನ ಸಮರಕ್ಕೆ ವೇದಿಕೆ ಸಿದ್ಧವಾಗಿದೆ
ವಿ






in 
