Share this news

ನವದೆಹಲಿ : ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಇನ್ನುಳಿದಂತೆ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿ, ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು ವರ್ಗಾವಣೆಗೊಳಿಸಿದೆ.
ಬೃಹತ್ ಮುಂಬಯಿ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹೆಚ್ಚುವರಿ ಆಯುಕ್ತರು ಮತ್ತು ಉಪ ಆಯುಕ್ತರನ್ನು ಚುನಾವಣಾ ಆಯೋಗ ವಜಾಗೊಳಿಸಿದೆ. ಇದಲ್ಲದೇ ಮೇಘಾಲಯ ಮತ್ತು ಹಿಮಾಚಲ ಪ್ರದೇಶದ ಸಿಎಂ ಕಾರ್ಯದರ್ಶಿಯನ್ನು ಚುನಾವಣಾ ಆಯೋಗ ವಜಾಗೊಳಿಸಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *