

ಕಾರ್ಕಳ: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಗ್ರಾಮದ ಚೆನ್ನಿಬೆಟ್ಟು ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆನ್ನಿಬೆಟ್ಟುವಿನ ಆನಂದ (69ವರ್ಷ) ಆತ್ಮಹತ್ಯೆ ಮಾಡಿಕೊಂಡವರು.
ಆನಂದ ಅವರು ಕಳೆದ 10 ವರ್ಷಗಳಿಂದ ವಿಪರೀತ ಮದ್ಯಪಾನ ಮಾಡುತ್ತಿದ್ದು, ಇದೇ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಅಂಗಳದ ತಗಡು ಚಪ್ಪರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








