ಕಾರ್ಕಳ: ವಿದ್ಯಾರ್ಥಿಯೋರ್ವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣಕ್ಕೆ ಮನನೊಂದು ತನ್ನ ಮನೆಯಿಂದ ಸ್ವಲ್ಪ ದೂರದಲ್ಲಿರುವ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಮಂಜರಬೆಟ್ಟುವಿನ ರಮೇಶ್ ಅವರ ಪುತ್ರ ತೇಜಸ್ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ತೇಜಸ್ 10 ನೇ ತರಗತಿ ಪರೀಕ್ಷೆಯಲ್ಲಿ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದ. ನಂತರ ಅಜೆಕಾರಿನಲ್ಲಿ ಟ್ಯೂಷನ್ ತರಗತಿಯಲ್ಲಿ ಓದಿ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆದಿದ್ದು, ದುರದೃಷ್ಟವಶಾತ್ ಮತ್ತೆ ಅನುತ್ತೀರ್ಣನಾಗಿದ್ದ. ಇದೇ ಕಾರಣಕ್ಕೆ ಮನನೊಂದಿದ್ದ ತೇಜಸ್ ಮಾರ್ಚ್ 27 ರಂದು ಬೆಳಿಗ್ಗೆ 12:30 ರಿಂದ ಬೆಳಿಗ್ಗೆ 10:30 ರ ನಡುವೆ ತನ್ನ ಮನೆಯಿಂದ ಸ್ವಲ್ಪ ದೂರದಲ್ಲಿರುವ ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
K