ನವದೆಹಲಿ, ಅ. 23: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಿಗ್ಮಾ ಗ್ಯಾಂಗ್‌ನ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ಗಳನ್ನು ಹತ್ಯೆ ಮಾಡಲಾಗಿದೆ. ದೆಹಲಿ ಮತ್ತು ಬಿಹಾರ ಪೊಲೀಸರ ತಂಡಗಳು ಮತ್ತು ಗ್ಯಾಂಗ್ಸ್ಟರ್ಗಳ ನಡುವೆ ವಾಯುವ್ಯ ದೆಹಲಿಯಲ್ಲಿ ಬೆಳಗಿನ ಜಾವ 2.20 ಕ್ಕೆ ಗುಂಡಿನ ಚಕಮಕಿ ನಡೆಯಿತು.ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಪೊಲೀಸರು ಗ್ಯಾಂಗ್ ಸದಸ್ಯರನ್ನು ತಡೆಯಲು ಪ್ರಯತ್ನಿಸಿದಾಗ ಎನ್‌ಕೌಂಟರ್ ನಡೆಯಿತು. ಗ್ಯಾಂಗ್ಸ್ಟರ್ಗಳು ಪೊಲೀಸರ ಮೇಲೆ ಗುಂಡು ಹಾರಿಸಿದಾಗ ಅವರು ಕೂಡ ಪ್ರತೀಕಾರದ ದಾಳಿ ನಡೆಸಿದರು. ನಾಲ್ವರು ಆರೋಪಿಗಳಿಗೂ ಗುಂಡೇಟಿನ ಗಾಯಗಳಾಗಿದ್ದು, ಅವರನ್ನು ರೋಹಿಣಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಎಲ್ಲಾ ನಾಲ್ವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಬುಧವಾರ ಮುಂಜಾನೆ ಸುಮಾರು 2.20ಕ್ಕೆ ರೋಹಿಣಿ ಪ್ರದೇಶದ ಬಹದ್ದೂರ್ ಷಾ ಮಾರ್ಗದಲ್ಲಿ ಈ ಘಟನೆ ನಡೆದಿದೆ. ರಂಜನ್ ಪಾಠಕ್ (25), ಬಿಮ್ಲೇಶ್ ಮಹತೋ (25), ಮನೀಶ್ ಪಾಠಕ್ (33) ಮತ್ತು ಅಮಾನ್ ಠಾಕೂರ್ (21) ಎಂಬ ನಾಲ್ವರು ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಆರೋಪಿಗಳು.
ಪಾಠಕ್‌ನನ್ನು ಹಿಡಿದುಕೊಟ್ಟವರಿಗೆ 25,000 ರೂ. ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು . ಸೀತಾಮರ್ಹಿ ಮತ್ತು ಬಿಹಾರದ ಪಕ್ಕದ ಜಿಲ್ಲೆಗಳಲ್ಲಿ ನಡೆದ ಐದು ಪ್ರಮುಖ ಕೊಲೆಗಳು ಸೇರಿದಂತೆ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಪಾಠಕ್ ಬೇಕಾಗಿದ್ದ.ಪಾಠಕ್ ಸಾಮಾಜಿಕ ಮಾಧ್ಯಮ ಮತ್ತು ಆಡಿಯೊ ಸಂದೇಶಗಳ ಮೂಲಕ ಪೊಲೀಸರಿಗೆ ಬಹಿರಂಗವಾಗಿ ಸವಾಲು ಹಾಕುತ್ತಿದ್ದ ಎಂದು ದೆಹಲಿ ಪೊಲೀಸ್ ಮೂಲವೊಂದು ಬಹಿರಂಗಪಡಿಸಿದೆ.
ಇತ್ತೀಚೆಗೆ ಪತ್ತೆಯಾಗಿರುವ ಆಡಿಯೊ ಕ್ಲಿಪ್ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಗ್ಯಾಂಗ್ ರೂಪಿಸುತ್ತಿದ್ದ ಪ್ರಮುಖ ಪಿತೂರಿಯ ವಿವರಗಳನ್ನು ಬಹಿರಂಗಪಡಿಸಿದೆ ಎನ್ನಲಾಗಿದೆ. ಎನ್‌ಕೌಂಟರ್ ನಂತರ, ಪ್ರದೇಶವನ್ನು ಸುತ್ತುವರಿಯಲಾಯಿತು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಂಡಗಳನ್ನು ಕರೆಸಲಾಯಿತು. ಗ್ಯಾಂಗ್‌ನ ಉಳಿದ ಜಾಲ ಮತ್ತು ಅವರ ಸಂಭಾವ್ಯ ಸಂಪರ್ಕಗಳನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ.