
ಕೋಲ್ಕತ್ತಾ,ಮೇ.09: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಮಹಾ ಪತನವಾದ ಬಳಿಕ ಇದೇ ಮೊದಲ ಬಾರಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಈ ಮೂಲಕ ರಾಜಕೀಯ ಇತಿಹಾಸದಲ್ಲಿ ಬಿಜೆಪಿ ಪಾಲಿಗೆ ಅವಿಸ್ಮರಣೀಯ ದಿನವಾಗಿದೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ, ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಯವರಿಗೆ ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಅವರು ಬಂಗಾಳದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ.
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರದ ಪ್ರಮುಖ ಸಚಿವರು ಆಗಮಿಸಿದ್ದರು. ಅಲ್ಲದೇ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರಿ ಅಧಿಕಾರ ವಹಿಸಿಕೊಂಡರು.
ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅವರನ್ನು ಶಾಸಕರು ಸರ್ವಾನುಮತದಿಂದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
2020ರಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಸಂಘಟನಾ ಶಕ್ತಿ ಮತ್ತು ಹೋರಾಟವನ್ನು ಅಮಿತ್ ಶಾ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
