

ಕಾರ್ಕಳ, ಸೆ.07: ಮಹೀಂದ್ರ ಪಿಕಪ್ ಹಾಗೂ ಟಾಟಾ EV ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಹಾಗೂ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಸೇತುವೆ ಬಳಿ ಅಪಾಯಕಾರಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರ್ಕಳ ಕಡೆಯಿಂದ ಕೋಳಿ ಸಾಗಾಟದ ಪಿಕಪ್ ವಾಹನ ಸೇತುವೆಯ ತಿರುವಿನಲ್ಲಿ ಅತೀ ವೇಗವಾಗಿ ಬಂದು ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ.
ಪಿಕಪ್ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆ ಅಪಘಾತಕ್ಕೆ ಕಾರಣವಾಗಿದ್ದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
