ಕಾರ್ಕಳ : ತಾಲೂಕಿನ ಎರ್ಲಪಾಡಿ ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೆರೋಮ್ ಪಿಂಟೋ(70) ಆತ್ಮಹತ್ಯೆ ಮಾಡಿಕೊಂಡವರು. ಅವರು ಅಂಗವಿಕಲರಾಗಿದ್ದು ಕಳೆದ ಒಂದು ವರ್ಷದಿಂದ ಎರ್ಲಪಾಡಿಯ ಹೆರಾಲ್ಡ್ ಡಿಸೋಜ ಅವರ ತೋಟದ ಕೆಲಸ ಮಾಡಿಕೊಂಡು ತೋಟದ ಮನೆಯಲ್ಲೇ ವಾಸವಿದ್ದರು.
ಆದರೆ ಅವರು ಎಂದಿನಂತೆ ಇಂದು (ಮಂಗಳವಾರ) ಬೆಳಿಗ್ಗೆ ಕೆಲಸಕ್ಕೆ ಬರದಿದ್ದಾಗ ತೋಟದ ಮನೆಯ ಬಳಿ ಹೋಗಿ ನೋಡಿದಾಗ ಜೆರೋಮ್ ಪಿಂಟೋ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











