ಬೆಂಗಳೂರು: ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಇನ್ನುಮುಂದೆ ರಾಜ್ಯ ಸರ್ಕಾರದ ವತಿಯಿಂದ ಉಚಿತ ಕೀಮೋಥೇರಪಿ ಚಿಕಿತ್ಸೆ ಸಿಗಲಿದೆ. ಈ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಳೆ(ಮೇ23ರಂದು) ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ.
ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.ಇದು ಕಿಮೋಥೆರಪಿ ಚಿಕಿತ್ಸೆಗೆ ಸಹಕಾರಿಯಾಗಲಿದ್ದು, ಚಿಕಿತ್ಸೆ ವಂಚಿತ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ
ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ ಎಸ್‌ಎಎಸ್‌ಟಿ ನೊಂದಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರೆದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಹಬ್- ಅಂಡ್-ಸ್ಟೋಕ್ ಮಾದರಿಯಲ್ಲಿ ಪ್ರಾರಂಭಿಸಲಾಗುವುದು.