ಕಾರ್ಕಳ:ಲೋಕಸಭೆ ಚುನಾವಣೆ ಇನ್ನು ಕೆಲವೇ ದಿನಗಳಲ್ಲಿ ಘೋಷಣೆಯಾಗುವ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದ್ದು, ಕಾರ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ ಎನ್ ಗುರುದತ್ ಅವರು ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದು, ಮೂಲ್ಕಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿರುವ ಗುರುಶಾಂತಪ್ಪ ಕಾರ್ಕಳ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆಯಾಗಿದ್ದು ಫೆ.23ರಂದು ಅಧಿಕಾರ ಸ್ವೀಕರಿಸಿದರು.
ನೂತನ ಕಾರ್ಯನಿರ್ವಾಹಕ ಅಧಿಕಾರಿ ಅವರನ್ನು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಪಂ ರಾಜ್ ಹಾಗೂ ವ್ಯವಸ್ಥಾಪಕ ಹರೀಶ್ ಕೆ.ಬಿ ರವರು ಸ್ವಾಗತಿಸಿದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ರಮೇಶ್ ಎಸ್ ಹಾಜರಿದ್ದರು.