ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನ ಹಾಗೂ ಬೈಲೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ 3 ವರ್ಷಗಳ ಅವಧಿಯು ಜ. 11ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯು ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ.
ಬೈಲೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಗ್ರಾಮ ಆಡಳಿತಾಧಿಕಾರಿ ಹಾಗೂ ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮರ್ಣೆ ಗ್ರಾಮ ಆಡಳಿತ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದೆ.