
ಕಾರ್ಕಳ,ಏ.08: ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26 ಸಾಲಿನ 7ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಅಮೃತ ವೇದಿಕೆಯಲ್ಲಿ ಜರುಗಿತು.
ಈ ಸಮಾರಂಭದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು ಕಲಿತ ಶಾಲೆಯಲ್ಲಿ ಪಡೆದ ಅನುಭವಗಳನ್ನು ತಮ್ಮ ಅನಿಸಿಕೆಯಲ್ಲಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಹಾಗೂ ಎಲ್ಲಾ ಶಿಕ್ಷಕರುಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳ ನೆನಪಿಗಾಗಿ ಶಾಲೆಗೆ ಊಟದ ಬಟ್ಟಲು ಇಡುವ ಸ್ಟ್ಯಾಂಡನ್ನು ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಬಿಸಿಯೂಟ ಸಿಬ್ಬಂದಿ ಭಾಗವಹಿಸಿದ್ದರು.ವಿದ್ಯಾರ್ಥಿ ಅನುಷಾ ಕಾರ್ಯಕ್ರಮ ನಿರೂಪಿಸಿ, ಸಹನಾ ವಂದಿಸಿದರು.
















.
.
.
.
.
.
.
.
.
.
