ಶಿವಮೊಗ್ಗ:ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಆಗುಂಬೆ ಘಾಟಿಯಲ್ಲಿ ಭೂ ಕುಸಿತದ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜೂ27 ರಿಂದ ಸೆ.15ರವರೆಗೆ ಮುಂಜಾಗ್ರತಾ ಕ್ರಮವಾಗಿ ಭಾರೀ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಆಗುಂಬೆ ಘಾಟಿಯಲ್ಲಿ ಪ್ರತೀ ವರ್ಷ ವಿಪರೀತ ಮಳೆಯಿಂದ ಹಲವೆಡೆ ಭೂಕುಸಿತವಾಗುವ ಸಂಭವ ಇರುವುದರಿಂದ ಜೂ.27ರಿಂದ ಸೆ.15ರವರೆಗೆ ಭಾರೀ ವಾಹನ ಸಂಚರಿಸದಂತೆ ಆದೇಶಿಸಲಾಗಿದೆ. ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವ ಘನ ವಾಹನಗಳು ತೀರ್ಥಹಳ್ಳಿ -ಮಾಸ್ತಿಕಟ್ಟೆ- ಸಿದ್ದಾಪುರ-ಕುಂದಾಪುರ ಮೂಲಕ ಉಡುಪಿ ತಲುಪಬಹುದು. ಉಡುಪಿಯಿಂದ ತೀರ್ಥಹಳ್ಳಿ ಬರುವವರು ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ ಮೂಲಕ ತೀರ್ಥಹಳ್ಳಿಗೆ ಸಂಚರಿಸಬಹುದಾಗಿದೆ
ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
