ಕಾರ್ಕಳ: ಹೆಬ್ರಿ ಹಾಗೂ ಕಾರ್ಕಳ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಾಗೂ ಮರಾಠಿ ಕ್ರೀಡಾ ಸಂಭ್ರಮ 2025 ಕಾರ್ಯಕ್ರಮವು ನಾಳೆ (ಫೆ 23 ರಂದು) ಕಾರ್ಕಳದ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದೆ.
ಶಿವಾಜಿ ಜಯಂತಿ ಆಚರಣೆಯ ಬಳಿಕ ಅವಿಭಜಿತ ದಕ್ಷಿಣ ಉಡುಪಿ ಜಿಲ್ಲೆಗಳ ಮರಾಠಿ ಸಮಾಜದ ಬಾಂಧವರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ ಸೇರಿದಂತೆ ಹಲವಾರು ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು,ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷ ಶೇಖರ ಕಡ್ತಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
