
ಕಾರ್ಕಳ, ಜು. 17: ಕಾರ್ಕಳ ತಾಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಪ್ರಸಾದ್ ರಾವ್ ಅವರು ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶುಕ್ರವಾರ ಮುಂಜಾನೆ ಮೃತಪಟ್ಟರು.
ಮೃತ ಶಿವಪ್ರಸಾದ್ ರಾವ್ ಅವರ ಶರೀರದ ಅಂತಿಮ ದರ್ಶನಕ್ಕಾಗಿ ಕಾರ್ಕಳ ತಾಲೂಕು ಕಚೇರಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಸಹಾಯಕ ಕಮಿಷನರಾದ ರಶ್ಮಿ,ಕೆ.ಎಸ್, ತಹಶಿಲ್ದಾರ್ ಪ್ರದೀಪ್ ಕುಮಾರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ, ಸೇರಿದಂತೆ ಹಲವಾರು ಗಣ್ಯರು, ತಾಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಶಿವಪ್ರಸಾದ್ ರಾವ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಇದಾದ ಬಳಿಕ ಅವರ ಊರಾದ ನಂದಳಿಕೆಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
