Share this news

ನವದೆಹಲಿ: ಭಾರತ ಮತ್ತು ಯೆಮೆನ್ ಮುಖಂಡರ ಸತತ ಪ್ರಯತ್ನದ ಫಲವಾಗಿ ಕೊನೆಗೂ ಸಂಧಾನ ಯಶಸ್ವಿಗೊಂಡಿದ್ದು ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆಮ್ ರದ್ದುಗೊಳಿಸಿದೆ ಎಂದು ಧರ್ಮಬೋಧಕ ಜಾಗತಿಕ ಶಾಂತಿ ಪ್ರವರ್ತಕ ಡಾ. ಕೆ ಎ ಪೌಲ್ ವಿಡಿಯೋ ಸಂದೇಶದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ತೆರಳಿದರು. ಅವರು ತಮ್ಮ ದೈನಂದಿನ ಕೂಲಿ ಕಾರ್ಮಿಕರಾದ ಪೋಷಕರಿಗೆ ಆರ್ಥಿಕ ಸಹಾಯ ನೀಡಲು ಯೆಮೆನ್​ಗೆ ತೆರಳಿದ್ದರು. ಯೆಮೆನ್‌ನಲ್ಲಿ ತನ್ನ ಕ್ಲಿನಿಕ್ ಅನ್ನು ಪ್ರಾರಂಭಿಸಲು ಸಹಾಯ ಮಾಡುವುದಾಗಿ ತಲಾಲ್ 2014ರಲ್ಲಿ ಭರವಸೆ ನೀಡಿದಾಗ ಆಕೆ ತಲಾಲ್ ಅಬ್ದೋ ಮಹ್ದಿ ಅವರ ಜೊತೆ ಒಡನಾಟ ಬೆಳೆಸಿಕೊಂಡರು.

ಯೆಮೆನ್ ವ್ಯವಹಾರ ಕಾನೂನಿನ ಪ್ರಕಾರ ಅಲ್ಲಿ ಬ್ಯುಸಿನೆಸ್ ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಮಿಷಾ ತಲಾಲ್ ಜೊತೆ 2015ರಲ್ಲಿ ಸನಾದಲ್ಲಿ ತನ್ನ ಕ್ಲಿನಿಕ್ ಪ್ರಾರಂಭಿಸಿದರು. ಸ್ವಲ್ಪ ದಿನದಲ್ಲೇ ಅವರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು. ಆಕೆ ಯೆಮೆನ್ ಬಿಟ್ಟು ಹೋಗದಂತೆ ನೋಡಿಕೊಳ್ಳಲು ತಲಾಲ್ ನಿಮಿಷಾರ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ. ಆತನಿಂದ ನಿಮಿಷಾ ತನ್ನ ಪಾಸ್‌ಪೋರ್ಟ್ ಮರಳಿ ಪಡೆದು ಭಾರತಕ್ಕೆ ಹಿಂತಿರುಗಲು ಅವನಿಗೆ ಅಮಲಿನ ಡ್ರಗ್ ಚುಚ್ಚಿದಳು. ಆದರೆ, ಅದು ಓವರ್ ಡೋಸ್ ಆಗಿ ಆತ ಸಾವನ್ನಪ್ಪಿದನು. ಇದರಿಂದ ಆಕೆಯನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಲಾಯಿತು.

ಇದೀಗ ಯೆಮೆಮ್ ಮತ್ತು ಭಾರತೀಯ ಮುಖಂಡರ ಸತತ ಪ್ರಯತ್ನದ ಬಳಿಕ ಸಂಧಾನ ಯಶಸ್ವಿಯಾಗಿದ್ದು ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಪಡಿಸಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.

 

Leave a Reply

Your email address will not be published. Required fields are marked *