
ಮಂಗಳೂರು,ಮೇ.13 ; ದಕ್ಷಿಣ ಕನ್ನಡದ ಕುತ್ತಾರಿನಲ್ಲಿ ವೃತ್ತ ನಿರ್ಮಾಣವನ್ನು ವಿರೋಧಿಸಿ ಮುಸ್ಲಂ ಸಮುದಾಯದ ತಂಡ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ಕುರಿತಂತೆ ಸ್ಪೀಕರ್ ಅವರ ಅಂಗರಕ್ಷಕ ಮೊಹಮ್ಮದ್ ಯಾಸಿನ್ ನೀಡಿದ ದೂರಿನಂತೆ 11 ಜನರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಕುತ್ತಾರು ಜಂಕ್ಷನ್‌ನಲ್ಲಿ ವೃತ್ತ ನಿರ್ಮಾಣ ವಿಚಾರ ಹಾಗು ಸ್ಥಳೀಯ ಸಮಸ್ಯೆಗಳ ಕುರಿತು ಅಸಮಾಧಾನಗೊಂಡಿದ್ದ ಯುವಕರ ಗುಂಪು ಉಳ್ಳಾಲ ತಾಲೂಕಿಗೆ ಆಗಮಿಸಿದ್ದ ಸ್ಪೀಕರ್ ಯು.ಟಿ. ಖಾದರ್ ಅವರ ಮುಂದೆ ಏರುಧ್ವನಿಯಲ್ಲಿ ಆಕ್ರೋಶಿತರಾಗಿ ವರ್ತಿಸಿದ್ದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸ್ಪೀಕರ್ ಯುಟಿ ಖಾದರ್ ಅವರ ಅಂಗರಕ್ಷಕ ಉಳ್ಳಾಲ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜನಪ್ರತಿನಿಧಿಯೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಉಲ್ಲಂಘಿಸಿ ಗುಂಪು ಸೇರಿದ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು 11 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.

