Share this news

ಬೆಂಗಳೂರು : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಕೇಸ್ ನಲ್ಲಿ ಪ್ರಿಯಾಂಕಾ ಖರ್ಗೆ ಪಾತ್ರವಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದರು. ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕರು ಮಂಗಳವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಚಿವ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದರು.ಇದರಿಂದ ಕೆರಳಿರುವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪೊಲೀಸರು ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಪೋಸ್ಟರ್ ಅಭಿಯಾನದಲ್ಲಿ ಭಾಗಿಯಾಗಿದ್ದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಸಿ ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.
ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಪಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಿ ಎಸ್ ಐ ಶಶಿಧರ ಅವರು ದೂರು ನೀಡಿದ್ದರು. ಶಶಿಧರ್ ವಣ್ಣೂರ್ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.

 

 

Leave a Reply

Your email address will not be published. Required fields are marked *