

ರಾಯಚೂರು : ಮಂತ್ರಾಲಯದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ ನಡೆಯಿತು. ಆರಾಧನಾ ಮಹೋತ್ಸವದ ಬಳಿಕ ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಗೋಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೇವಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಗಾಹುತಿ ಆಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಧ್ರಪ್ರದೇಶದ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಗೋಶಾಲೆಯ ಗೋವುಗಳು ಸುರಕ್ಷಿತವಾಗಿವೆ.



