

ರಾಜಪುರ,ನ.6: ಪಂಜಾಬಿನ ರಾಜಪುರ ಬಳಿಯ ಸರಾಯ್ ಬಂಜಾರಾ ರೈಲ್ವೆ ನಿಲ್ದಾಣದ ಸಮೀಪ ಅಮೃತಸರದಿಂದ ನ್ಯೂ ಜಲಪೈಗುರಿಗೆ ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ: 12508) ರೈಲಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರೈಲಿನ ಹಲವು ಬೋಗಿಗಳಲ್ಲಿ ಇದ್ದಕ್ಕಿದ್ದಂತೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಹಾಗೂ ಕಾಲ್ತುಳಿತದ ವಾತಾವರಣ ನಿರ್ಮಾಣವಾಯಿತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಜಾಗರೂಕರಾದ ರೈಲ್ವೆ ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ, ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲು ಕ್ರಮವಹಿಸಿದರು.
ರೈಲು ರಾಜಪುರ ಜಂಕ್ಷನ್ ತಲುಪುತ್ತಿದ್ದಂತೆ ಬೋಗಿಯೊಂದರಿAದ ದಟ್ಟ ಹೊಗೆ ಹೊರಬರಲು ಪ್ರಾರಂಭಿಸಿತು. ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆಗಳು ಪಕ್ಕದ ಬೋಗಿಗಳಿಗೂ ಹರಡಲು ಪ್ರಾರಂಭಿಸಿದವು. ಬೆಂಕಿಯನ್ನು ಕಂಡ ತಕ್ಷಣವೇ ಪ್ರಯಾಣಿಕರು ಚೀರಾಡುತ್ತಾ ಬಾಗಿಲುಗಳತ್ತ ಧಾವಿಸಿದರು. ತಕ್ಷಣ ಸಮಯಪ್ರಜ್ಞೆ ತೋರಿದ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದರು. ರೈಲು ನಿಲ್ಲಿಸಿದ ತಕ್ಷಣವೇ ಪ್ರಯಾಣಿಕರು ತಮ್ಮ ಲಗೇಜ್ಗಳೊಂದಿಗೆ ರೈಲಿನಿಂದ ಕೆಳಗೆ ಜಿಗಿದು ಜೀವ ಉಳಿಸಿಕೊಂಡರು. ಸ್ಥಳೀಯ ಸಾರ್ವಜನಿಕರು ಹಾಗೂ ರೈಲ್ವೆ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರ ರಕ್ಷಣೆಗೆ ನೆರವಾದರು.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಭಾರಿ ಹರಸಾಹಸ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿ ಹೊತ್ತಿಕೊಂಡ ಬೋಗಿಗಳನ್ನು ರೈಲಿನ ಉಳಿದ ಭಾಗದಿಂದ ಬೇರ್ಪಡಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಯಿತು. ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣವೇ ಅಥವಾ ಯಾವುದಾದರೂ ತಾಂತ್ರಿಕ ದೋಷವೇ ಎಂಬುದರ ಕುರಿತು ರೈಲ್ವೆ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ





.
.
.
.
.
.
.
.
.
.
.
.
.
.
.
.
.
.
.
.
