ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ಗೆ ದೊಡ್ಡ ಆಘಾತ ಎದುರಾಗಿದ್ದು, ಕೋಲಾರ ಲೋಕಸಭೆಗೆ ಕೆ.ಹೆಚ್ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣನಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣದ ಐವರು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ
ಕೊತ್ತರು ಮಂಜುನಾಥ್, ಸಚಿವ ಸುಧಾಕರ್, ನಜೀರ್ ಆಹ್ಮದ್, ಅನಿಲ್ ಕುಮಾರ್ ಸೇರಿದಂತೆ ಐವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಈ ನಡುವೆ ಒಂದು ವೇಳೆ ಚಿಕ್ಕಪೆದ್ದಣ್ಣನಿಗೆ ಟಿಕೆಟ್ ನೀಡಿದರೆ ಒಟ್ಟಾಗಿ ಕೆಲಸ ಮಾಡುತ್ತೇವೆ, ಆದರೆ ಟಿಕೆಟ್ ಹಂಚಿಕೆಯ ಕುರಿತು ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುನಿಯಪ್ಪ ಹೇಳಿದ್ದಾರೆ.
ಕೋಲಾರದಲ್ಲಿ ಕೆ.ಹೆಚ್ ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣವಿದ್ದು, ಲೋಕಸಭಾ ಟಿಕೆಟ್ ಹಂಚಿಕೆ ವಿಚಾರದಲ್ಲಿ ಇವರ ನಡುವಿನ ತಿಕ್ಕಾಟ ಜೋರಾಗಿದ್ದು ಅಂತಿಮವಾಗಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿದೆ ಎನ್ನುವುದು ಸಧ್ಯದ ಕುತೂಹಲವಾಗಿದೆ.