Share this news

ಬೆಂಗಳೂರು: ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡನ್ ಸೂಚನೆ ನೀಡಿದ್ದಾರೆ.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಜೊತೆ ಸಭೆ ನಡೆಸಿದ ಅವರು, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚನೆ ನೀಡಿದರು.

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸಲೇಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಕೌಂಟರ್ ಕೇಸ್?ಗಳಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಾಗಿದೆಯೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮುಖ್ಯ ಕಾರ್ಯದರ್ಶಿಗಳು, 3 ವಿಶೇಷ ನ್ಯಾಯಾಲಯಗಳಿಗೆ ಮಾತ್ರ ಅನುಮತಿ ಸಿಕ್ಕಿದೆ. ಇನ್ನೂ 24 ವಿಶೇಷ ನ್ಯಾಯಾಲಯಗಳಿಗೆ ಅನುಮತಿ ದೊರೆತಿಲ್ಲ. ಬಳಿಕ ಈ ಬಗ್ಗೆ ಕ್ರಮ ಕೈಗೊಂಡು ಬಾಕಿ ನ್ಯಾಯಾಲಯಗಳಿಗೆ ಬೇಗ ಅನುಮತಿ ಸಿಗುವಂತೆ ಮಾಡುವ ದಿಸೆಯಲ್ಲಿ ಗಮನ ಹರಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಹೆಚ್‌ಸಿ ಮಹದೇವಪ್ಪ, ಕೆಎನ್ ರಾಜಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಿಧಾನಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಸ್‌ಸಿ ಎಸ್‌ಟಿ ಸಮುದಾಯದ ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *