
ಮಂಡ್ಯ, ಜುಲೈ 26: ಇತ್ತೀಚೆಗಷ್ಟೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ 2028ರ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎನ್ನುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ ದಿ. ಕೆ.ಆರ್.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾಧ್ಯದವರ ಜೊತೆ ಮಾತನಾಡಿ ನಿವೃತ್ತಿಯ ಮಾತುಗಳನ್ನಾಡಿದರು. ಆದರೆ ಅದೇ ವೇಳೆ ನೀವಿನ್ನೂ 10 ವರ್ಷ ರಾಜಕೀಯದಲ್ಲಿ ಇರಬೇಕೆಂದು ಬೆಂಬಲಿಗರು ಒತ್ತಾಯಿಸಿರುವ ಘಟನೆಯೂ ನಡೆದಿದೆ.
ಸಿದ್ದರಾಮಯ್ಯ ಅವರು ಎರಡು ಅವಧಿಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಒಟ್ಟು 8 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವ ಮೂಲಕ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನೂ ಬರೆದಿದ್ದಾರೆ. 2013ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗುವ ಸಂದರ್ಭದಲ್ಲಿ, ಇದು ತಮ್ಮ ಕೊನೆಯ ಚುನಾವಣೆ ಎಂದು ಮಾಧ್ಯಮಗಳ ಮುಂದೆ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಿಂದ ಸ್ಪರ್ಧಿಸುವ ಮುನ್ನ, 2018ರ ಚುನಾವಣೆಯು ಬಹುಪಾಲು ತಮ್ಮ ಕೊನೆಯ ಚುನಾವಣೆಯಾಗಲಿದೆ ಎಂದು ಪುನರುಚ್ಚರಿಸಿದ್ದರು. 2024ರ ಏಪ್ರಿಲ್‌ನಲ್ಲಿ ಮೈಸೂರಿನಲ್ಲಿ ಮಾತನಾಡುವ ಸಂದರ್ಭದಲ್ಲಿಯೂ ತನಗೆ ಈಗ 77 ವರ್ಷ. ಈ ಅವಧಿ ಮುಗಿಯುವಾಗ 81-82 ವರ್ಷ ದಾಟಿರುತ್ತದೆ. ಆ ಸಂದರ್ಭದಲ್ಲಿ ಉತ್ಸಾಹದಿಂದ ಕೆಲಸ ಮಾಡಲು ಆರೋಗ್ಯ ಸಹಕರಿಸುವುದಿಲ್ಲ. ಹಾಗಾಗಿ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದಿದ್ದರು.
ಇದೀಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ ಮುಂದಿನ ಚುನಾವಣೆ ಸಂದರ್ಭದಲ್ಲಿ ಮತ್ತೆ ಇದು ನನ್ನ ಕೊನೆಯ ಚುನಾವಣೆ ಎಂದು ಸ್ಪರ್ಧೆಗೆ ಇಳಿದು ಯೂಟರ್ನ್ ಹೊಡೆದರೂ ಅಚ್ಚರಿಯಿಲ್ಲ.



.
.
.
.
.
.
.
.
.
.
.
.
.
.
.
.
.
.
.
.
