ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಆರೋಗ್ಯದಲ್ಲಿ ಹಠಾತ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್.21ರಂದು ಎಸ್ ಎಂ ಕೃಷ್ಣ ಅವರಿಗೆ ಜ್ವರ, ಕೆಮ್ಮ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ನಂತ್ರ ಅವರು ಡಿಸ್ಚಾರ್ಜ್ ಆಗಿದ್ದರು. ಆದರೆ ಇಂದು ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.