ಶಿವಮೊಗ್ಗ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ನಿನ್ನೆ ಜ್ವರ ಕಾಣಿಸಿಕೊಂಡು, ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿರೋದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನು ಜ್ವರದಿಂದ ಬಳಲುತ್ತಿರುವ ಕಾಗೋಡು ತಿಮ್ಮಪ್ಪ ಅವರನ್ನು, ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರ ಪುತ್ರಿ ಡಾ.ರಾಜನಂದಿನಿ ಅವರು ಶಿವಮೊಗ್ಗಕ್ಕೆ ಕರೆದೊಯ್ದಿದ್ದಾರೆ. ಈಗ ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
93 ವರ್ಷದ ಕಾಗೋಡು ತಿಮ್ಮಪ್ಪ ಅವರು ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಯಾರೂ ಆತಂಕ ಪಡುವಂತ ಅಗತ್ಯವಿಲ್ಲ ಅಂತ ಅವರ ಪುತ್ರಿ ಡಾ.ರಾಜನಂದಿನಿ ಮಾಹಿತಿ ಹಂಚಿಕೊಂಡಿದ್ದಾರೆ.