ಕಾರ್ಕಳ: ಕಾರ್ಕಳ ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಡಿ.22 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಹೆಯ ಉಪಕುಲಪತಿಗಳಾದ ಡಾ.ಶರತ್ ರಾವ್, ಎಂ. ಆರ್.ಜಿ ಗ್ರೂಪ್ ಸಂಸ್ಥಾಪಕ ಹಾಗೂ ಉದ್ಯಮಿಗಳಾದ ಕೆ.ಪ್ರಕಾಶ್ ಶೆಟ್ಟಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೆಶಕ ಹಾಗೂ ತಾಂತ್ರಿಕ ಶಿಕ್ಷಣದ ನಿರ್ದೇಶಕರಾದ ಪ್ರಸನ್ನ. ಎಚ್ (ಐಎಎಸ್) ಭಾಗವಹಿಸಲಿದ್ದಾರೆ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.