ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ ಕು.ಗುಣಶ್ರೀ ಆರ್, ಮನಸ್ವಿ.ಎಚ್.ಟಿ, ಪ್ರಥಮ ವಿಜ್ಞಾನ ವಿಭಾಗದ ಕು.ಪೂರ್ಣಶ್ರೀ.ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ಕು.ದಿಗಂತ್.ಎಚ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
in