ಮಂಗಳೂರು: ಇ ಡಿ ಅಧಿಕಾರಿಗಳ ಸೋಗಿನಲ್ಲಿ ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಕೇರಳ ಪೊಲೀಸ್ ಅಧಿಕಾರಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ ಈಗ ಏಳಕ್ಕೆ ಏರಿಕೆಯಾಗಿದೆ
ಜ. 3 ರಂದು ರಾತ್ರಿ, ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ, ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ ನಿವಾಸಿಗಳಾದ ಅನಿಲ್ ಫರ್ನಾಂಡಿಸ್ (49), ಸಚ್ಚಿನ್ ಟಿ ಎಸ್ (29) ಹಾಗೂ ಶಬಿನ್ ಎಸ್ (27) ಎಂಬವರುಗಳನ್ನು ಬಂಧಿಸಿದ್ದು, ಅವರುಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.
ತನಿಖೆ ಮುಂದುವರಿಸಿದ ಪೋಲಿಸರು ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳಿಯ ಆರೋಪಿ ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್ (37) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿ, ಆತ ನೀಡಿದ ಮಾಹಿತಿಯ ಅಧಾರದಲ್ಲಿ ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (27) ಎಂಬವರನ್ನು ದಸ್ತಗಿರಿ ಮಾಡಿರುವುದಾಗಿದೆ. ಸದ್ರಿ ಪ್ರಕರಣದ ತನಿಖೆ ಮುಂದುವರಿದAತೆ, ದರೋಡೆ ಕೃತ್ಯಕ್ಕೆ ಮೂಲ ಸೂತ್ರದಾರನಾದ ಕೇರಳದ ಶಫೀರ್ ಬಾಬು (48) ಎಂಬಾತನನ್ನು ಬಂಧಿಸಿದ್ದು, ಈತನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕನಾಗಿದ್ದಾನೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿದ್ದಾರೆ.