
ಬೆಂಗಳೂರು, ಜೂ. 24: ಈಗಾಗಲೇ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣಗೆ ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಈಗಾಗಲೇ ಹಣ ನೀಡಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳ ಹಣವನ್ನು ಮರುಪಾವತಿಗೆ ಮಹತ್ವದ ಆದೇಶ ಹೊರಡಿಸಿದೆ. KSRTC, BMTC, NWKRTC, KKRTC ನಿಗಮಗಳು ಹಣ ವಾಪಸ್ ಪಡೆಯುವ ಬಗ್ಗೆ ವಿದ್ಯಾರ್ಥಿಗಳಿ ಅವಕಾಶ ನೀಡಿದ್ದು, ಹಣ ಮರುಪಾವತಿಗೆ ಅರ್ಜಿಸಲು ಕೋರಿದೆ. ಹೀಗಾಗಿ ಹಣ ವಾಪಸ್ ಪಡೆದುಕೊಳ್ಳಲು ವಿದ್ಯಾರ್ಥಿಗಳು 29-05-2026ರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಿದ 7 ದಿನಗಳಲ್ಲಿ ಹಣ ಮರುಪಾವತಿಯಾಗಲಿದೆ.
ಸರ್ಕಾರದ ಅಧಿಕೃತ ಸೇವಾ ಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in/buspassservices/ ಗೆ ಭೇಟಿ ನೀಡಿ.ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಬರುವ ಒಟಿಪಿ (OTP) ಮೂಲಕ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಆಧಾರ್ ಆಧಾರಿತ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಕಡ್ಡಾಯ. ವಿದ್ಯಾರ್ಥಿ ಅಥವಾ ಅವರ ಪೋಷಕರ ಬ್ಯಾಂಕ್ ಖಾತೆಯ ವಿವರಗಳನ್ನು ನಿಖರವಾಗಿ ತಂತ್ರಾಂಶದಲ್ಲಿ ನಮೂದಿಸಬೇಕು. ಅರ್ಜಿ ಸಲ್ಲಿಸಿದ 7 ದಿನಗಳ ಒಳಗಾಗಿ ನಿಮ್ಮ ಬ್ಯಾಂಕ್ ಖಾತೆಗೆ NEFT ಅಥವಾ RTGS ಮೂಲಕ ಹಣ ಜಮಾ ಆಗಲಿದೆ. ಹಣ ಜಮೆಯಾದ ನಂತರ ನಿಮ್ಮ ಮೊಬೈಲ್ಗೆ ಎಸ್ಎಂಎಸ್ (SMS) ಸಂದೇಶ ಬರಲಿದೆ.
ಈ ಮರುಪಾವತಿ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್ಲೈನ್ನಲ್ಲಿ ನಡೆಯುವುದರಿಂದ, ವಿದ್ಯಾರ್ಥಿಗಳು ಯಾವುದೇ ಸಾರಿಗೆ ಕಚೇರಿ ಅಥವಾ ಕೌಂಟರ್ಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ ಎಂದು ನಿಗಮವು ಸ್ಪಷ್ಟಪಡಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಆಗುವ ಅಲೆದಾಟವನ್ನು ತಪ್ಪಿಸಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
