
ಬೆಂಗಳೂರು,ಜೂ.03: ಡಿಕೆ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಸಚಿವ ಸಂಪುಟ ನಡೆಸಿದ್ದು, ವಿದ್ಯಾರ್ಥಿಗಳಿಗೆ ಬಸ್ ಪಾಸ್ ಫ್ರೀ ಸೇರಿದಂತೆ ಪ್ರಮುಖ ಆರು ಮಹತ್ವದ ಘೋಷಣೆಗಳನ್ನ ಮಾಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗದ ಸಮಸ್ಯೆ ನಿವಾರಣೆ, ರಸ್ತೆಗಳ ನಿರ್ಮಾಣಕ್ಕೆ 2000 ಕೋಟಿ ರೂ. ಹಾಗೂ 2,500 ಚ.ಅಡಿ ವಿಸ್ತೀರ್ಣ ಕಟ್ಟಡಕ್ಕೆ ಅರ್ಜಿ ಹಾಕಿದವರಿಗೆ ರಿಲೀಫ್ ನೀಡಿದ್ದಾರೆ. ಇನ್ನು ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ಬಿ ಖಾತಾಯಿಂದ ಎ ಖಾತೆ ಯೋಜನೆ ರಾಜ್ಯಕ್ಕೆ ವಿಸ್ತರಣೆ ಮಾಡುವುದಾಗಿ ಡಿಕೆಶಿ ಘೋಷಣೆ ಮಾಡಿದರು.
ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ ಶುಭಗಳಿಗೆ, ಶುಭ ಮುಹೂರ್ತ ಬರುತ್ತೆ ಎಂದು ಹೇಳುತ್ತಿದ್ದೆ ಇವತ್ತು ಸಂಜೆ 4.15ಕ್ಕೆ ಆ ಶುಭ ಗಳಿಗೆ, ಮುಹೂರ್ತ ಬಂತು. ಇವತ್ತು ಹೊಸ ದಿನ, ಹೊಸ ಕೆಲಸ, ಅವಕಾಶ ಆರಂಭಿಸುವ ದಿನ. ಇನ್ನೆರಡು ವರ್ಷಗಳಲ್ಲಿ ಹೊಸ ಅವಕಾಶ ಹುಡುಕುತ್ತಿದ್ದೇನೆ. ರಾಜ್ಯ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತೇನೆ. ರೈತರು, ಕಾರ್ಮಿಕರು, ಎಲ್ಲ ವರ್ಗದ ಜನರಿಗೆ ಕಳೆದ 6 ತಿಂಗಳಿAದ ಕಾರ್ಯಕ್ರಮಗಳನ್ನ ರೂಪಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಮಹತ್ವದ ಕಾರ್ಯಮಗಳ ಘೋಷಣೆ ಮಾಡುವ ಸುಳಿವು ನೀಡಿದರು.


.
.
.
.
.
.
.
.
.
.
.
.
.
.
.
.
.
.
.
.
