
ನವದೆಹಲಿ, ಫೆ. 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ.
ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗಬಹುದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಪ್ರಕರಣವೊಂದರ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್, ರಾಜ್ಯಗಳಲ್ಲಿ ಅಳವಡಿಸಿಕೊಂಡಿರುವ ಉಚಿತ ಗ್ಯಾರಂಟಿ ಸಂಸ್ಕೃತಿಯು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ.
ಉಚಿತ ವಸ್ತುಗಳನ್ನು ವಿತರಿಸುವ ಬದಲು ಉದ್ಯೋಗಾವಕಾಶಗಳನ್ನು ಸೃಷ್ಟಿಸುವತ್ತ ಗಮನಹರಿಸುವಂತೆ ನ್ಯಾಯಾಲಯವು ರಾಜ್ಯಗಳಿಗೆ ಸಲಹೆ ನೀಡಿತು.

.
.
.
.
.
.
.
.
.
.
