Share this news

ಕಾರ್ಕಳ: ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವು ದೇರಳಕಟ್ಟೆಯ ಜಸ್ಟೀಸ್ ಕೆ. ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದಲ್ಲಿ, ಬಜಗೋಳಿಯ ತುಡಾರ್ ಕಾಂಪ್ಲೆಕ್ಸ್ ನ ಶ್ರೀ ಸಾಯಿ ಸಭಾಭವನದಲ್ಲಿ ಜರುಗಿತು.

ಶಾಸಕ ವಿ. ಸುನಿಲ್ ಕುಮಾರ್ ಭಾರತಾಂಬೆಗೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿ ಮಾತನಾಡಿ, ಸೇವಾ ಪಕ್ಷೀಕೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರ ಸೇವೆಗೆ ತೊಡಗಿರುವುದು ಪ್ರಶಂಸನೀಯ. ಇಂತಹ ಆರೋಗ್ಯ ಶಿಬಿರಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಕಾರ್ಕಳ ಮಂಡಲ ಬಿಜೆಪಿಯ ಅಧ್ಯಕ್ಷ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಮಹಾವೀರ್ ಹೆಗ್ಡೆ, ಕೆ .ಎಸ್. ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿ ಸಂಚಿತಾ ಶೆಣೈ ಪಾಲ್ಗೊಂಡಿದ್ದರು.
ಕಾರ್ಕಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ, ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ, ಮಹಿಳಾ ಮೋರ್ಚಾದ ಅಧ್ಯಕ್ಷೆ ವಿನಯ್ ಡಿ. ಬಂಗೇರ, ಮಿಯಾರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಪ್ರಕಾಶ್ ಬಲಿಪ, ಪ್ರಧಾನ ಕಾರ್ಯದರ್ಶಿಗಳಾದ ಸುಮಿತ್ ನಲ್ಲೂರು, ರಜತ್ ಮುಡಾರು, ಮೂಡಾರು ಗ್ರಾಮ ಸಮಿತಿ ಅಧ್ಯಕ್ಷರಾದ ಸುರೇಶ್ ಸಾಲಿಯಾನ್, ಮಿಯಾರು, ಗ್ರಾಮ ಸಮಿತಿ ಅಧ್ಯಕ್ಷರು ಶರಣ್ ಕೆ ಶೆಟ್ಟಿ, ನಲ್ಲೂರು ಗ್ರಾಮ ಸಮಿತಿ ಅಧ್ಯಕ್ಷರಾದ ಪವನ್ ಜೈನ್, ಮಾಳ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ 250 ಕ್ಕೂ ಹೆಚ್ಚು ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಸದುಪಯೋಗಿಸಿಕೊಂಡರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ, ಜೊತೆಗೆ ಕಣ್ಣಿನ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಚರ್ಮರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು (ಇಓಖಿ) ಹಾಗೂ ಇಸಿಜಿ ತಪಾಸಣೆ ಸೇರಿದಂತೆ ವಿವಿಧ ವಿಭಾಗಗಳ ವೈದ್ಯರು ಸೇವೆ ನೀಡಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *