ಕಾರ್ಕಳ: ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಆಸ್ಟಿಯೊಪೊರೋಸಿಸ್ ಅಥವಾ ಅಸ್ಥಿರಂಧ್ರತೆಯ ಕುರಿತು ಮಾಹಿತಿ ಕೊರತೆಯಿಂದಾಗಿ ಸಾಕಷ್ಟು ಜನರು ಇಂದು ಅಸ್ಥಿರಂಧ್ರತೆ ಖಾಯಿಲೆಯಿಂದ ಬಳಲುತ್ತಿದ್ದಾರೆ.
ಮುಖ್ಯವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ, ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದರಿಂದ ಈ ಖಾಯಿಲೆ ತಡೆಗಟ್ಟಲು ಸಾಧ್ಯವಾಗುತ್ತದೆ.ದೇಹವು ಹೊಸ ಮೂಳೆಗಳನ್ನು ಸಮರ್ಪಕವಾಗಿ ರೂಪಿಸಲು ವಿಫಲವಾದಾಗ ಅಥವಾ ಅಸ್ತಿತ್ವದಲ್ಲಿರುವ ಮೂಳೆಗಳ ನಾಶ ಹೆಚ್ಚಾದಾಗ ಆಸ್ಟಿಯೊಪೊರೋಸಿಸ್ ಸಂಭವಿಸುತ್ತದೆ. ಯಾವುದೇ ನೋವು ಅಥವಾ ಗಾಯ ಇಲ್ಲದೇ ಮಾಡುವ ಬೋನ್ ಮಿನರಲ್ ಡೆನ್ಸಿಟಿ (BMD) ಪರೀಕ್ಷೆಗೆ ಒಳಗಾಗುವ ಮೂಲಕ, ವ್ಯಕ್ತಿಗಳು ತಮ್ಮ ಮೂಳೆಗಳ ಸಾಂದ್ರತೆಯನ್ನು ಕಂಡು ಹಿಡಿಯಬಹುದು ಮತ್ತು ಸ್ಥಿತಿಯನ್ನು ನಿರ್ವಹಿಸುವಲ್ಲಿ ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು ಎಂದು ಆಸ್ಪತ್ರೆಯ ಆರ್ಥೋಪೆಡಿಕ್ಸ್ ವಿಭಾಗದ ಮುಖ್ಯಸ್ಥ ಡಾ.ಸುನಿಲ್ ಬಾಳಿಗ ಹೇಳಿದ್ದಾರೆ.
ಫೆಬ್ರವರಿ 26 ರಂದು ಸೋಮವಾರ ಮೂಳೆ ಮತ್ತು ಕೀಲು ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ (BMD) ಶಿಬಿರವನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ ಗಂಟೆ 3ರವರೆಗೆ ಆಯೋಜಿಸಲಾಗಿದೆ. ಈ ಉಚಿತ ತಪಾಸಣಾ ಶಿಬಿರದಲ್ಲಿ 35 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು,ವಿಶೇಷವಾಗಿ ಮಹಿಳೆಯರು ಇದರ ಪ್ರಯೋಜನ ಪಡೆಯಬಹುದಾಗಿದೆ.
ಮೊದಲು ನೋಂದಾಯಿಸುವ 120 ವ್ಯಕ್ತಿಗಳಿಗೆ ಮಾತ್ರ ಸೀಮಿತವಾಗಿದ್ದು,ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನೋಂದಣಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9731601150 ಅಥವಾ 08258-230583 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕೀರ್ತಿನಾಥ ಬಲ್ಲಾಳ ತಿಳಿಸಿದ್ದಾರೆ.