ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ನಿಟ್ಟೆ ಎಜುಕೇಷನ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ನಿಟ್ಟೆ ವತಿಯಿಂದ ನೀಡಲಾದ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 13 ರಂದು ನಡೆಯಿತು.
ಸ್ಥಳೀಯ ವಾರ್ಡ್ ಮೆಂಬರ್ ಪುರಸಭಾ ಸದಸ್ಯೆ ಸುಮಾ ಕೇಶವ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಮಾಲಾಶ್ರೀ, ಸಹಶಿಕ್ಷಕ ಶಿವಾನಂದ ,ಅತಿಥಿ ಶಿಕ್ಷಕಿ ವಾಣಿ, ಗೌರವ ಶಿಕ್ಷಕಿ ಅಶ್ವಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಶಶಿಕಲಾ ಸ್ವಾಗತಿಸಿದರು, ಪದವೀಧರ ಸಹ ಶಿಕ್ಷಕಿ ಪ್ರತಿಮಾ.ಎಸ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಮಧುಶ್ರೀ ವಂದಿಸಿದರು.