ಬೆಂಗಳೂರು: ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಸಚಿವ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಇಲಾಖೆಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್, 108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ ಎಸ್ಎನ್ಸಿಯು ಮತ್ತು ಐಸಿಯುದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.