ಕಾರ್ಕಳ: ಕಳೆದ ಎರಡು ದಶಕಗಳಿಂದ ಅರಣ್ಯ ಮೂಲ ಬುಡಕಟ್ಟು ಮಲೆಕುಡಿಯ ಸಮುದಾಯದ ಹಾಡಿಗೆ ಸಂಪರ್ಕ ಕಲ್ಪಿಸಲು ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಮತ್ತಾವು ಎಂಬಲ್ಲಿ ಸೇತುವೆ ನಿರ್ಮಾಣಕ್ಕಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದ್ದು, ಅರಣ್ಯ ಇಲಾಖೆಯ ಕಾನೂನು ತೊಡಕುಗಳಿದ್ದ ಹಿನ್ನೆಲೆಯಲ್ಲಿ ಸೇತುವೆ ನಿರ್ಮಾಣದ ಕನಸು ಈಡೇರಿಲ್ಲ.
ಇದೀಗ ಶಾಸಕ ಸುನಿಲ್ ಕುಮಾರ್ ಅವರ ವಿಶೇಷ ಪ್ರಯತ್ನದ ಫಲವಾಗಿ 2 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿರುವುದು ಸಂತಸ ತಂದಿದೆ. ಅನುದಾನ ಬಿಡುಗಡೆಗೊಳಿಸಲು ಸಹಕರಿಸಿದ ಶಾಸಕ ವಿ ಸುನಿಲ್ ಕುಮಾರ್ ಅವರಿಗೆ ಹಾಗೂ ಇಲಾಖಾಧಿಕಾರಿಗಳಿಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಧನ್ಯವಾದ ಸಲ್ಲಿಸಿದ್ದಾರೆ.