
ಅಜೆಕಾರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಉಡುಪಿ ಜನತಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನ.12 ರಂದು ನಡೆದ
ಜಿಲ್ಲಾ ಮಟ್ಟದ 14/17 ವಯೋಮಾನದ ಕ್ರೀಡಾಕೂಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗಗನ್ ಜಯಕರ ಶೆಟ್ಟಿ ಗುಂಡುಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಚರ್ಚ್ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ವಂದನೀಯ ಗುರು, ಹೆನ್ರಿ ಮಸ್ಕರೇನಸ್, ಮುಖ್ಯ ಶಿಕ್ಷಕಿ ಶ್ರೀಮತಿ ರೇಷ್ಮಾ ಶೀಲಾ ರೋಡ್ರಿಗಸ್, ದೈಹಿಕ ಶಿಕ್ಷಣ ಶಿಕ್ಷಕರಾದ, ಶ್ರೀ. ಸುಶಾಂತ್, ಮತ್ತು ಶಿಕ್ಷಕ -ಶಿಕ್ಷಕೇತರ ವರ್ಗದವರು, ಪೋಷಕ ಪ್ರತಿನಿಧಿ ಹಾಗೂ ಪೋಷಕವರ್ಗದವರೆಲ್ಲರೂ ಶುಭ ಹಾರೈಸಿರುತ್ತಾರೆ.

