Share this news
ಕಾರ್ಕಳ;  ಭೋವಿ ಸಮುದಾಯದ ಬಡ ಯುವತಿಯೋರ್ವಳಿಗೆ ಮತ್ತು ಭರಿಸುವಂತ ಅಮಲು ಪದಾರ್ಥ ನೀಡಿ  ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ಅತ್ಯಂತ ಖಂಡನೀಯ.
ಇದೊಂದು ಪೈಶಾಚಿಕ ಕೃತ್ಯ  ಎಂದು ಘಟನೆಯನ್ನು  ಮಾಜಿ ಸಚಿವ, ಶಾಸಕ ವಿ ಸುನಿಲ್ ಕುಮಾರ್ ಕಟು ಶಬ್ದಗಳಿಂದ ಟೀಕಿಸಿದ್ದಾರೆ. ಯುವತಿಯನ್ನು ಪುಸಲಾಯಿಸಿ ಅಮಲು ಪದಾರ್ಥದೊಂದಿಗೆ   ಕಾರಿನಲ್ಲಿ  ಕರೆದೊಯ್ದು ಅಮಲು ಪದಾರ್ಥ ನೀಡಿ ಈ ಕೃತ್ಯ ನಡೆಸಿದ್ದಾರೆ ಎಂದರೆ ಇದನ್ನು  ಊಹಿಸಲು ಅಸಾದ್ಯ. ಇದೊಂದು ಪೂರ್ವಯೋಜಿತ ಅತ್ಯಂತ ಹೇಯ ಹಾಗೂ ಪೈಶಾಚಿಕ ಕೃತ್ಯ. ಈ ಪ್ರಕರಣ ಸಂಬಂಧ  ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು.
ಈ  ಮೂಲಕ  ಪ್ರಕರಣ ಹಿಂದಿರುವ ಶಕ್ತಿಗಳನ್ನು ಪತ್ತೆ ಹಚ್ಚಿ ಬೇಧಿಸಬೇಕು. ಈ ಹಿಂದೆಯೂ ಇಂತಹ ಕೃತ್ಯ ಎಸಗಿರುವ ಸಾಧ್ಯತೆ ದೃಷ್ಟಿಯಿಂದಲೂ  ಸೂಕ್ತ ತನಿಖೆಯಾಗಬೇಕು. ಸಂತ್ರಸ್ತ ಯುವತಿಯ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು. ಜಿಲ್ಲಾಡಳಿತ ಯುವತಿಗೆ ಮಾನಸಿಕ ಧೈರ್ಯ ತುಂಬಿ,  ಯುವತಿ ಮತ್ತು ಕುಟುಂಬಕ್ಕೆ ಸೂಕ್ತ ನೆರವು ನೀಡಬೇಕು ಎಂದು ಸುನಿಲ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ

                        

                          

                        

                          

 

`

Leave a Reply

Your email address will not be published. Required fields are marked *