ಉಡುಪಿ: ಕಳೆದ ತಿಂಗಳು ಉಡುಪಿಯ ಕುಂಜಿಬೆಟ್ಟು ವೃತದಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಗರುಡ ಗ್ಯಾಂಗಿನ ವಿಚಾರಣಾಧೀನ ಕೈದಿಗಳು ಜೈಲಿನ ಅಧೀಕ್ಷಕ ಹಾಗೂ ಸಿಬಂದಿಗಳಿಗೆ ಅವಾಚ್ಯವಾಗಿ ನಿಂದಿಸಿ ಚಹಾ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಎಂದಿನಂತೆ ಮನೆಯವರ ಜತೆ ಮಾತನಾಡಲು ಕರೆ ಮಾಡುವುದು ತಡವಾಯಿತೆಂದು ತಗಾದೆ ತೆಗೆದ ವಿಚಾರಣಾಧೀನ ಕೈದಿ ಮೊಹಮ್ಮದ್ ಆಶಿಕ್ ಮತ್ತು ಮೊಹಮ್ಮದ್ ಸಕ್ಲೇನ್ ಜೈಲರ್ ಎಸ್.ಎ.ಶಿರೋಳಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಗಳನ್ನು ತಳ್ಳಿ ಕೊಠಡಿಯಲ್ಲಿದ್ದ ಕುರ್ಚಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಜೊತೆಗೆ ಅಡುಗೆ ಕೋಣೆಯಲ್ಲಿದ್ದ ಚಹಾ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಜೈಲರ್ ಆರೋಪಿಸಿದ್ದಾರೆ.
ಈ ಘಟನೆಯ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












