ಉಡುಪಿ: ಮುಂಬರುವ ರಾಜ್ಯ ಬಜೆಟ್ ನಲ್ಲಿ ಉಡುಪಿ ಕ್ಷೇತ್ರದ ಅಭಿವದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ಹಾಗೂ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.
ಮುಂಬರುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿರುವ ಉಡುಪಿ ಜಿಲ್ಲೆಯ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ, ನೂತನ ಜಿಲ್ಲಾಸ್ಪತ್ರೆಯ ಕಟ್ಟಡ ಕಾರ್ಯಾಚರಣೆಗೆ ಅಗತ್ಯವಿರುವ 48.36 ಕೋಟಿ ಹೆಚ್ಚುವರಿ ಅನುದಾನ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ, ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಡೀಸೆಲ್ ಸಬ್ಸಿಡಿ, ನಾಡ ದೋಣಿಗಳಿಗೆ ಸೀಮೆ ಎಣ್ಣೆ ಪೂರೈಕೆ, ಬಂದರು ಅಭಿವೃದ್ಧಿ ಮತ್ತು ಡ್ರೆಜ್ಜಿಂಗ್, ಸೀ ಆಂಬ್ಯುಲೆನ್ಸ್, ರೈತಾಪಿ ವರ್ಗಗಳಿಗೆ ನೀಡುವ ಸಾಲ ಸೌಲಭ್ಯ ಮೀನುಗಾರರರಿಗೂ ವಿಸ್ತರಣೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವದ್ಧಿ ನಿಗಮಕ್ಕೆ 500 ಕೋಟಿ ಅನುದಾನ ಮೀಸಲು, ಪ್ರಾಕೃತಿಕ ವಿಕೋಪ ಪರಿಹಾರಕ್ಕೆ 25 ಕೋಟಿ ಮೀಸಲು, ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಈ ಹಿಂದಿನAತೆ ಗರಿಷ್ಠ 5 ಲಕ್ಷ ಪರಿಹಾರ, ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಕೃಷಿ ಕಾಲೇಜು ಸ್ಥಾಪನೆ, ಸರ್ಕಾರಿ ಬಸ್ ಸೇವೆ ಹೆಚ್ಚಳ, ಕ್ರೀಡಾ ಚಟುವಟಿಕೆಗಳಿಗೆ ಕ್ರೀಡಾಂಗಣ ನಿರ್ಮಾಣ ಬ್ರಹ್ಮಾವರದಲ್ಲಿ ಪ್ರವಾಸಿ ಬಂಗಲೆ, ಸರ್ಕಾರಿ ವೈದ್ಯಕೀಯ ಕಾಲೇಜು, ಪರ್ಯಾಯ ಮಹೋತ್ಸವಕ್ಕೆ ವಿಶೇಷ 25 ಕೋಟಿ ಅನುದಾನ, ಮಣ್ಣಪಳ್ಳ ಕೆರೆ ಅಭಿವೃದ್ಧಿ, ಕಂಬಳ ಕ್ರೀಡೆಗೆ ಅನುದಾನ, ಉಡುಪಿ ನಗರದಲ್ಲಿ ಹೆಚ್ಚುವರಿಯಾಗಿ ಉಪ ವಿಭಾಗಾಧಿಕಾರಿಗಳ ಕಚೇರಿ ಮಂಜೂರು, ಕರಾವಳಿ ಜಿಲ್ಲೆಯ ಮರಳು ಸಮಸ್ಯೆ ಪರಿಹಾರ ರೂಪಿಸಲು ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ಸಿಎಂ ಭರವಸೆ.
ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆ ಕಂಬಳ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಹಾಗೂ ದೈವಾರಾಧನೆಯ ಚೌಕಟ್ಟಿನಲ್ಲಿ ರಕ್ತಾಹಾರದ ಕಲ್ಪನೆಯಲ್ಲಿ ನಡೆಯುವ ಕೋಳಿಅಂಕ ಗಳಿಗೆ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿ ಆಚರಣೆಗೆ ಅನನುಕೂಲತೆ ಉಂಟಾಗಿರುವ ಬಗ್ಗೆ ಶಾಸಕ ಯಶ್ ಪಾಲ್ ಸುವರ್ಣ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಧಾರ್ಮಿಕ ಆಚರಣೆಗೆ ಅವಕಾಶ ನೀಡುವ ಭರವಸೆ ನೀಡಿದರು.
