ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಬಂದ್ದಿದ್ದು, ನಾಯಿ ಮಾಂಮಾಂಸಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಲ್ಯಾಬ್‌ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದು ಹೇಳಿದರು.
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು.
ಮುಡಾ ಹಗರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆದೇಶ ನೀಡಿದ್ದಾರೆ. ಅದರೂ ಸಹ ಬಿಜೆಪಿಯವರು ಅನಾವಶ್ಯಕವಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೇ ಜನರಲ್ಲಿ ಸರಕಾರದ ವಿರುದ್ದ ತಪ್ಪು ತಿಳಿವಳಿಕೆ ಮೂಡಿಸುತ್ತಿದ್ದಾರೆ ಎಂದರು.
ಜನರಿಗೆ ಸತ್ಯ ತಿಳಿಸುವ ಸಲುವಾಗಿ ಮುಖ್ಯಮಂತ್ರಿಗಳು ಆಯೋಗ ರಚಿಸಿದ್ದಾರೆ. ಯಾವುದೇ ಕಾನೂನು ಬಾಹಿರ ಕೆಲಸ ಅಗಿಲ್ಲ. ಜನರಿಗೆ ಸತ್ಯ ತಿಳಿಸಲು ಆಯೋಗ ನೇಮಿಸಿ ತನಿಖೆ ಕೈಗೊಂಡಿದ್ದಾರೆ. ಇದರಿಂದ ಜನರಿಗೆ ನಿಜ ತಿಳಿಯಲಿದೆ ಎಂದರು.
`