
ಕಾರ್ಕಳ, ಏ.26: ಕಾರ್ಕಳ ನಗರದ ಪತ್ತೊಂಜಿಕಟ್ಟೆ ಎಂಬಲ್ಲಿನ ಶಂಕರ ಕುಲಾಲ್ ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಕುರಿತು ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಚಿನ್ನಾಭರಣ ಕಳವುಗೈದ ಪೆರ್ಡೂರು ಬೈರಂಪಳ್ಳಿ ನಿವಾಸಿ ಆನಂದ ಕುಲಾಲ್(43) ಹಾಗೂ ಕಳವುಗೈದ ಚಿನ್ನ ಖರೀದಿಸಿದ ಅಜೆಕಾರಿನ ಜಯರಾಮ ಆಚಾರ್ಯ(54) ಎಂಬವರು ಬಂಧಿತ ಆರೋಪಿಗಳು.
ಏ. 23 ರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು ಕಪಾಟಿನೊಳಗೆ ಇರಿಸಿದ್ದ ಸುಮಾರು 24 ಗ್ರಾಂ ತೂಕದ ಚಿನ್ನದ ನೆಕ್ಲೆಸ್, 3 ಗ್ರಾಂ ತೂಕದ ಮೂರು ಉಂಗುರಗಳು, 3 ಗ್ರಾಂ ತೂಕದ ಬೆಂಡೋಲೆ ಹಾಗೂ 3 ಗ್ರಾಂ ತೂಕದ ಜುಮ್ಕಿಗಳು ಸೇರಿ ಒಟ್ಟು 2.64 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದರು.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಕಾರ್ಕಳ ನಗರ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಒಟ್ಟು ಸುಮಾರು ರೂ. 5.60 ಲಕ್ಷ ಮೌಲ್ಯದ 39 ಗ್ರಾಂ ತೂಕದ ಚಿನ್ನಾಭರಣಗಳನ್ನು ಕರಗಿಸಿದ ಸ್ಥಿತಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
