
ಬೆಂಗಳೂರು,ಅ.30: ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು ಹಾಗೂ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಅಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಪಾಠ, ಪ್ರವಚನಕ್ಕೆ ತೊಂದರೆಯಾಗದAತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬAಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿAದಲೇ ಒದಗಿಸಿಕೊಂಡು ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರು ಹಾಗೂ ಸಂಸ್ಥೆಯ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.




